ಬೆಂಗಳೂರು, ಜು.29(DaijiworldNews/AA): ಭೋವಿ ನಿಗಮದ ವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಇಂದು ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ತಮ್ಮ ವಿರುದ್ಧದ ಆರೋಪಗಳನ್ನು ಹಿಂಪಡೆಯಬೇಕು ಅಥವಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಬೇಕು ಎಂದು ಸಂಸದ ಪೂಜಾರಿ ಅವರು ಬ್ಯಾನರ್ ಹಿಡಿದು ಧರಣಿ ಕುಳಿತರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ, ಬಿಜೆಪಿಯ ಹಿರಿಯ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಎಸ್.ಸುರೇಶಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.