ದೆಹಲಿ, ಜು.29(DaijiworldNews/AA): ಮದ್ಯನೀತಿ ಹಗರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಇತರರ ವಿರುದ್ಧ ಸಿಬಿಐ ರೋಸ್ ಅವೆನ್ಯೂ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಇಂದು ಹೈಕೋರ್ಟ್ನಲ್ಲಿ ಕೇಜ್ರಿವಾಲ್ ಅವರ ಜಾಮೀನು ವಿಚಾರಣೆ ವೇಳೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಬಿಐ ಸಲ್ಲಿಸಿದ ಚಾರ್ಜ್ ಶೀಟ್ ಹೈ-ಪ್ರೊಫೈಲ್ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಆಪಾದಿತ ಅಕ್ರಮಗಳ ತನಿಖೆಯ ಭಾಗವಾಗಿದೆ. ಚಾರ್ಜ್ ಶೀಟ್ ಸಲ್ಲಿಸುವ ಮೊದಲು, ದೆಹಲಿ ಅಬಕಾರಿ ನೀತಿಯ ದುರುಪಯೋಗದ ಬಗ್ಗೆ ಸಮಗ್ರ ತನಿಖೆ ನಡೆಸಲಾಯಿತು. ಇದು ದೊಡ್ಡ ಪ್ರಮಾಣದ ಆರ್ಥಿಕ ಅಕ್ರಮಗಳಿಗೆ ಕಾರಣವಾಗಿದೆ ಎಂದು ಸಿಬಿಐ ತಿಳಿಸಿದೆ.
ಸಿಬಿಐ ಸಲ್ಲಿಸಿರುವ ಈ ಚಾರ್ಜ್ ಶೀಟ್ ನಿಂದಾಗಿ ಕೇಜ್ರಿವಾಲ್ ವಿರುದ್ಧ ಕಾನೂನು ಪ್ರಕ್ರಿಯೆಗಳನ್ನು ತೀವ್ರಗೊಳ್ಳಲಿದೆ. ಹಾಗೂ ದೆಹಲಿಯ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.