ನವದೆಹಲಿ, ಜು.29(DaijiworldNews/AK): ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆ ಕೇಂದ್ರ ಒಪ್ಪಿಕೊಂಡಿದೆ. ನಾನು ಸಾಕಷ್ಟು ನೀರಿನ ವ್ಯಾಜ್ಯ ಬಗೆಹರಿಸಿದ್ದೇನೆ. ಮುಂದಿನ ಬಜೆಟ್ ವೇಳೆಗೆ ಇರುತ್ತೋನೋ ಇಲ್ವೊ ಗೊತ್ತಿಲ್ಲ. ಹಾಗಾಗಿ ಬೆಂಗಳೂರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ನಗರದಲ್ಲಿ ಕುಡಿಯುವ ನೀರು ಸಮಸ್ಯೆ ಇದೆ. ನಾನು ಯಾರನ್ನು ಟೀಕಿಸಲು ಹೋಗುವುದಿಲ್ಲ. ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಜನರು ಕುಡಿಯುವ ನೀರಿಲ್ಲದೇ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಈಗ ಮಳೆಯಿಂದ ಎಲ್ಲವೂ ಸುಗಮವಾಗಿದೆ. ಒಂದು ಮಳೆ ಬರದಿದ್ದರೆ ಪರಿಸ್ಥಿತಿ ಏನು ಹೇಳಿ ಎಂದು ಪ್ರಶ್ನಿಸಿದ್ದಾರೆ. ಹಳೇ ಮೈಸೂರು ಭಾಗ, ಬೆಂಗಳೂರಿಗೆ ಇದೇ ಆಧಾರ. ಇದಕ್ಕಾಗಿ ಜನರು ಎನ್ಡಿಎಗೆ ಮತವನ್ನ ಹಾಕಿದ್ದಾರೆ ಎಂದು ಹೇಳಿದ್ದಾರೆ.
ನಾನು ಕೃಷಿ, ನಿರುದ್ಯೋಗ ಸಮಸ್ಯೆ ಬಗ್ಗೆ ಮಾತಾಡುತ್ತೇನೆ. ಬದ್ಧತೆ ಇರುವವರನ್ನು ಕೃಷಿ ಸಚಿವರನ್ನ ಮಾಡಿದ್ದಾರೆ. ಅನುಭವ ಇರುವ ತಂಡ ಆಯ್ಕೆ ಮಾಡಿಕೊಂಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಗುಜರಾತ್ ಮಾದರಿ ಎಂದು ಪ್ರಧಾನಿ ಮೋದಿಯನ್ನು ಹೆಚ್ಡಿ ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಹೃದಯಪೂರ್ವಕವಾಗಿ ಬೆಂಬಲಿಸುತ್ತೇನೆ. 1991ರಲ್ಲಿ ಸಂಸತ್ಗೆ ಬಂದೆ, ಈಗ ನನಗೆ 92 ವರ್ಷ. ಮುಂದಿನ ಬಜೆಟ್ ಬಗ್ಗೆ ಮಾತಾಡ್ತೇನೋ ಇಲ್ವೋ ಗೊತ್ತಿಲ್ಲ. ನಾನು ಎನ್ಡಿಎ ಭಾಗವಾಗಿದ್ದೇನೆ ಅದಕ್ಕಾಗಿ ಧನ್ಯವಾದ ಎಂದಿದ್ದಾರೆ.ಸ್ಪೀಕರ್ ಆಯ್ಕೆಯಿಂದ ಹಿಡಿದು ಪ್ರಮುಖ ನಿರ್ಧಾರಗಳಲ್ಲಿ, ಯಾರು ಆಕ್ಷೇಪ ವ್ಯಕ್ತಪಡಿಸಿಲ್ಲ. ಕರ್ನಾಟಕದಲ್ಲಿ ಎರಡು ಸೀಟು ಮಾತ್ರ ನಮ್ಮ ಶಕ್ತಿ, 1 ಸಂಪುಟ ದರ್ಜೆ ಸ್ಥಾನ ನೀಡಿದ್ದಾರೆ ಎಂದರು.