ಬೆಂಗಳೂರು, ಆ.7(DaijiworldNews/AK): ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಕೆ ಕಂಡರೂ ಅಕ್ಟೋಬರ್ ಅಂತ್ಯದವರೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳು ಕಡಿಮೆಯಾದ ಬಳಿಕ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬಂದಿತು ಎನ್ನಲು ಸಾಧ್ಯವಿಲ್ಲ. ಬಿಸಿಲು-ಮಳೆಯ
ವಾತಾವರಣದಿಂದ ಪ್ರಕರಣಗಳ ಏರಿಳಿತವಾಗುತ್ತದೆ ಎಂದರು.
ರಾಜ್ಯದಲ್ಲಿ 259 ಮಂದಿ ಹೊಸದಾಗಿ ಡೆಂಗ್ಯೂ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದ್ದು, ಈ ಜ್ವರ ಪೀಡಿತರಲ್ಲಿ 395 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ ಸಕ್ರಿಯ ಡೆಂಗ್ಯೂ ಪ್ರಕರಣಗಳ ಸಂಖ್ಯೆ 2,085ಕ್ಕೆ ಇಳಿಕೆಯಾಗಿದೆ. ತೀವ್ರ ನಿಗಾ ಘಟಕದಲ್ಲಿರುವ ಆರು ಮಂದಿ ಸೇ ರಿ 258 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
24 ಗಂಟೆಗಳ ಅವಧಿಯಲ್ಲಿ 1,989 ಪರೀ ಕ್ಷೆಗಳನ್ನು ನಡೆಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 126 ಸೇರಿ 27 ಜಿಲ್ಲೆಗಳಲ್ಲಿ ಹೊಸದಾಗಿ ಡೆಂಗಿ ಪ್ರಕರಣಗಳು ಖಚಿತಪಟ್ಟಿವೆ. ಬೆಳಗಾವಿ 23ಹಾಗೂ ತುಮಕೂರಿನಲ್ಲಿ 13ಅಧಿಕ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಡೆಂಗಿ ಪತ್ತೆಗೆ ಸಂಬಂಧಿಸಿದಂತೆ ಈವರೆಗೆ 1.38 ಲಕ್ಷ ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 19,923ಕ್ಕೆ ಏರಿಕೆಯಾಗಿದೆ.