ನವದೆಹಲಿ, ಆ.10(DaijiworldNews/AA): ಮುಂದಿನ ಸಂಪುಟ ಕಾರ್ಯದರ್ಶಿಯನ್ನಾಗಿ ಟಿ.ವಿ. ಸೋಮನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸೋಮನಾಥನ್ ಅವರು ಆಗಸ್ಟ್ 30 ರಂದು ಸಂಪುಟ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ರಾಜೀವ್ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ನೇಮಕಾತಿ ಕುರಿತ ಸಂಪುಟ ಸಮಿತಿಯು ಟಿ.ವಿ.ಸೋಮನಾಥನ್ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇದುವರೆಗೆ ಅವರು ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರಿಗೆ ಪದೋನ್ನತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇನ್ನು ಸೋಮನಾಥನ್ ಅವರನ್ನು ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.