ಕೋಲಾರ, ಆ.13(DaijiworldNews/AA): ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಅರ್ಜಿ ವಿಚಾರಕ್ಕೆ ಸಂಬಂಧಪಟ್ಟಂತೆ ಮುಂದಿನ ವಿಚಾರಣೆ ನಡೆಸಲು ರಾಜ್ಯ ಹೈಕೋರ್ಟ್ ಅಗತ್ಯ ದಾಖಲೆ ನೀಡುವಂತೆ ಕೇಳಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆದ್ದಿದ್ದರು. ಇದನ್ನ ಪ್ರಶ್ನಿಸಿ ಮರು ಮತ ಎಣಿಕೆಗೆ ಕೋರಿ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅಗತ್ಯ ದಾಖಲಾತಿ ನೀಡುವಂತೆ ಕೇಳಿದೆ. ಈ ಹಿನ್ನೆಲೆಯಲ್ಲಿ ಇಂದು ಕೋಲಾರ ಜಿಲ್ಲಾಧಿಕಾರಿಗಳು ದಾಖಲಾತಿಗಾಗಿ ಇವಿಎಂ ಸ್ಟ್ರಾಂಗ್ ರೂಂ ತೆರೆಯಲಿದ್ದಾರೆ ಎಂದು ಮೂಲಗಳಿಮದ ತಿಳಿದುಬಂದಿದೆ.
ಡಿಸಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಸಮ್ಮುಖದಲ್ಲಿ ಇಂದು ಇವಿಎಂ ಸ್ಟ್ರಾಂಗ್ ರೂಂ ತೆರೆಯಲಿದ್ದಾರೆ. ಈ ಸಂರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳು ಇರುತ್ತಾರೆ. ಸ್ಟ್ರಾಂಗ್ ರೂಮ್ ತೆರೆದ ಬಳಿಕ ಏಜೆಂಟರ್ ಜೆರಾಕ್ಸ್ ಪ್ರತಿ ಸೇರಿದಂತೆ ಮರು ಮತ ಎಣಿಕೆಗೆ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತೆಗೆಯಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.