ಬೆಂಗಳೂರು, ಆ.14(DaijiworldNews/AK): ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ಸತ್ಯ. ಆದರೆ, ಪಕ್ಷದ ವೇದಿಕೆಯಲ್ಲಾಗಲಿ, ಸರ್ಕಾರದ ಹಂತದಲ್ಲಿ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರ ಮಾತನಾಡಿದ ಅವರು, ಗ್ಯಾರಂಟಿ ಯೋ ಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯ. ಈಗಾಗಲೇ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಶಾಸಕರು, ಕಾರ್ಯಕರ್ತರು ಸಾರ್ವ ಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ .13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋ ಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇ ಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯ ಆಗುವುದಿಲ್ಲ. ಒಂದೊಂ ದು ಹೇ ಳಿಕೆಗಳನ್ನು ನೀ ಡುತ್ತಾ ಹೋದರೆ ಗೊಂದಲವಾಗುತ್ತದೆ ಎಂದರು.