ಕೋಲಾರ, ಆ 14(DaijiworldNews/MS): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ 2022ರ ರಾಜ್ಯ ವಿಧಾನಸಭಾ ಚುನಾವಣೆ ಮರುಎಣಿಕೆ ಮಾಡಬೇಕೆಂದು ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಮತ ಎಣಿಕೆಯಲ್ಲಿ ಲೋಪದೋಷಗಳಿವೆ ಎಂಬ ಪ್ರಕರಣಕ್ಕೆ ಸಂಬಂದಿಸಿದಂತೆ ಮತ ಎಣಿಕೆಯ ಸಂದರ್ಭದಲ್ಲಿ ಬಳಸಲಾದ ಫಾರಂ 17ಸಿ ಮತ್ತು ಮತಗಳ ಎಣಿಕೆಯ ಸಿಸಿ ಟಿವಿ ದೃಶ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೋಲಾರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕೊಠಡಿಯನ್ನು ತೆರೆದು ದಾಖಲೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.
ಸುದ್ದಿಗಾರರೊಂದಿಗೆ ಅಭ್ಯರ್ಥಿ ಮಂಜುನಾಥಗೌಡ, ಮತಗಳ ಎಣಿಕೆ ವೇಳೆ ಹಲವಾರು ಲೋಪದೋಷಗಳು ನಡೆದಿವೆ. ಈ ಕುರಿತು ಹೈಕೋರ್ಟ್ ನಲ್ಲಿ ತಕರಾರು ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.