ಕಾನ್ಪುರ, ಸೆ.30(DaijiworldNews/AK): ಬಾಂಗ್ಲಾದೇಶದ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀ ಮ್ ಇಂಡಿಯಾ ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದೆ.
ಉತ್ತರ ಪ್ರದೇ ಶದ ಕಾನ್ಪುರದ ಗ್ರೀ ನ್ ಪಾರ್ಕ್ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾದೇ ಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಆರಂಭಗೊಂಡಿದ್ದು, ಬಾಂಗ್ಲಾದೇ ಶ ಮೊದಲ ಇನಿಂಗ್ಸ್ನಲ್ಲಿ 74.2 ಓವರ್ಗಳಲ್ಲಿ 233 ರನ್ ಗಳಿಸಿ ಆಲೌಟ್ ಆಗಿದೆ.
ಇದಕ್ಕೆ ಪ್ರತ್ಯುತ್ತರ ನೀಡಿದ ಟೀಮ್ ಇಂಡಿಯಾ ಮೊದಲ ಇನಿಂ ಗ್ಸ್ನಲ್ಲಿ 20 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿದೆ. ಭಾರತ ಪರ ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ 51 ಎಸೆತಗಳಲ್ಲಿ 72 ರನ್ ಗಳಿಸಿ ಮಿಂ ಚಿದ್ದಾರೆ. ಇತ್ತ ನಾಯಕ ರೋಹಿತ್ ಶರ್ಮಾ 11 ಎಸೆತಗಳಲ್ಲಿ 3 ಸಿಕ್ಸರ್, 1 ಬೌಂಡರಿ ಸಹಿತ 23 ರನ್ ಗಳಿಸಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದ್ದಾರೆ.
ಈ ಪಂ ದ್ಯದಲ್ಲಿ ಟೀ ಮ್ ಇಂ ಡಿಯಾದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇ ಗದ ಅರ್ಧ ಶತಕ ಪೂರೈ ಸಿದ ತಂಡ ಎಂ ಬ ಹೆಗ್ಗಳಿಕೆಗೆ ಪಾತ್ರವಾಗಿದೆ.