ಬೆಂಗಳೂರು,ಅ.17(DaijiworldNews/TA):ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ.
ಇನಿಂಗ್ಸ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 2 ರನ್ಗಳಿಸಿ ಔಟಾದರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದದ್ದು ವಿಶೇಷ ಆಗಿತ್ತು.
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು ಎನ್ನಲಾಗಿದೆ.
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಒಟ್ಟು 536 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಸಾಧನೆ ಕಿಂಗ್ ಕೊಹ್ಲಿ ಪಾಲಾಗಿದೆ. ಈ ಮೂಲಕ ಭಾರತದ ಪರ ಅತ್ಯಧಿಕ ಇಂಟರ್ನ್ಯಾಷನಲ್ ಮ್ಯಾಚ್ಗಳನ್ನು ಆಡಿದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ ವಿರಾಟ್ ಕೊಹ್ಲಿ.