ಮುಂಬೈ,ನ.03(DaijiworldNews/AK): ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ಬೆನ್ನಲ್ಲೇ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ನಂ.1 ಸ್ಥಾನ ಕಳೆದುಕೊಂಡಿದೆ.
12 ಪಂದ್ಯಗಳಲ್ಲಿ 62.50 ಪಿಸಿಟಿ ಪಡೆದಿರುವ ಆಸ್ಟ್ರೇಲಿಯಾ ತಂಡ ಮತ್ತೆ ಅಗ್ರಸ್ಥಾನಕ್ಕೆ ಏರಿದ್ದು, 14 ಪಂದ್ಯಗಳಲ್ಲಿ 58.33 ಪಿಸಿಟಿ ಪಡೆದಿರುವ ಟೀಂ ಇಂಡಿಯಾ 2ನೇ ಸ್ಥಾನಕ್ಕೆ ಕುಸಿದಿದೆ. ಇನ್ನೂ 3, 4 ಮತ್ತು 5ನೇ ಸ್ಥಾನಗಳಲ್ಲಿ ಕ್ರಮವಾಗಿ ಶ್ರೀಲಂಕಾ, ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸ್ಥಾನ ಪಡೆದುಕೊಂಡಿವೆ.
ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಆಔಂಅಣೌರ್ಣಣೂ ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ವಾಶ್ ಆಗಿತ್ತು.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಭಾರತದ ವಿರುದ್ಧ 26 ರನ್ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್ ಸರಣಿಯ ಗೆಲುವನ್ನು ತನ್ನದಾಗಿಸಿಕೊಂಡಿದೆ. . ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ವೈಟ್ವಾಶ್ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.