ನವದೆಹಲಿ, ನ.08(DaijiworldNews/AK): 2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿಗಾಗಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಭದ್ರತಾ ದೃಷ್ಟಿಯಿಂದ ಬಿಸಿಸಿಐ ನಿರಾಕರಿಸಿದೆ.
ಅಲ್ಲದೇ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿಸುವ ಪ್ರಸ್ತಾವನೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದಿಟ್ಟಿದೆ. ಪಂದ್ಯಾವಳಿಯನ್ನು ದುಬೈಗೆ ಸ್ಥಳಾಂತರಿಸುವ ಕುರಿತು ಪತ್ರ ಬರೆಯಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
2025ರ ಫೆ. 19ರಿಂದ ಮಾರ್ಚ್ 5ರವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಜಗತ್ತಿನ 8 ದೇಶದ ತಂಡಗಳು ಪಾಲ್ಗೊಳ್ಳಲಿವೆ. ಈ ಬಾರಿಯ ಆತಿಥ್ಯವನ್ನು ಪಾಕಿಸ್ತಾನ ವಹಿಸಿಕೊಂಡಿದ್ದು, ಕರಾಚಿ, ಲಾಹೋರ್ ಹಾಗೂ ರಾವಲ್ಪಿಂಡಿಯಲ್ಲಿ ಆಡಿಸುವುದಾಗಿ ಹೇಳಿದೆ.
ಅಲ್ಲದೇ ಈಗಾಗಲೇ ಚಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕುರಿತು ಸರ್ಕಾರದ ಗಮನಕ್ಕೆ ತರಲಾಗಿತ್ತು. ಸರ್ಕಾರದ ನಿರ್ಧಾರದಂತೆ ಮಂಡಳಿ ನಿರ್ಣಯ ಕೈಗೊಂಡಿದೆ.
2023ರ ಏಷ್ಯಾ ಕಪ್ ಕೂಡಾ ಆರಂಭದಲ್ಲಿ ಪಾಕಿಸ್ತಾನದಲ್ಲೇ ಐಸಿಸಿ ಚಾಂಪಿಯನ್ ಟ್ರೋಫಿ ಆಯೋ ಜನೆಗೊಂಡಿತ್ತು. ಆದರೆ ಬಳಿಕ ಇದನ್ನು ಬದಲಿಸಿ ಪಾಕಿಸ್ತಾನ ಹಾಗೂ ಶ್ರೀಲಂಕಾದಲ್ಲಿ ಆಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಇದರಲ್ಲಿ ಭಾರತವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.