ಮುಂಬೈ, ನ.08(DaijiworldNews/AA): ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ದಂಪತಿಗಳು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ೨೦೨೫ರಲ್ಲಿ ಮನೆಗೆ ಹೊಸ ಅತಿಥಿಯ ಆಗಮನವಾಗಲಿದೆ.
ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಥಿಯಾ ಶೆಟ್ಟಿ 'ಇಷ್ಟರಲ್ಲೇ ನಮ್ಮ ಮನೆಗೆ ಪುಟ್ಟ ಅತಿಥಿಯ ಆಗಮನವಾಗಲಿದೆ' ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಹಾಗೂ ಕೆ ಎಲ್ ರಾಹುಲ್ ಅವರ ಅಭಿಮಾನಿಗಳಿಗೆ ಶುಭ ಸುದ್ದಿ ತಿಳಿಸಿದ್ದಾರೆ.
ರಾಹುಲ್ ಮತ್ತು ಬಾಲಿವುಡ್ ನಟಿ ಆಥಿಯಾ ಶೆಟ್ಟಿ 2023 ರ ಜನವರಿ 23 ರಂದು ವಿವಾಹವಾಗಿದ್ದರು. ಇದೀಗ ಆಸ್ಟ್ರೇಲಿಯಾ ಸರಣಿಗೂ ಮುನ್ನ ತಮ್ಮ ಮೊದಲ ಮಗುವಿನ ಆಗಮನದ ವಿಚಾರವನ್ನು ರಾಹುಲ್ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೆಎಲ್ ರಾಹುಲ್ ಅವರ ವೃತ್ತಿಬದುಕಿನಲ್ಲಿ ಏರುಪೇರು ಉಂಟಾಗಿದ್ದು, ಅವಕಾಶಗಳ ಮೇಲೆ ಅವಕಾಶಗಳು ಸಿಗುತ್ತಿದ್ದರೂ ಅದನ್ನು ಬಳಸಿಕೊಳ್ಳಲು ಎಡವುತ್ತಿದ್ದಾರೆ. ಈ ಹಿನ್ನೆಲೆ ರಾಹುಲ್ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಜೊತೆಗೆ ಟೀಕೆಗಳಿಗೂ ಒಳಗಾಗುತ್ತಿದ್ದಾರೆ.