ಮುಂಬೈ,ನ.11(DaijiworldNews/AK): ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನವೆಂಬರ್ 22 ರಿಂದ ಆರಂಭವಾಗಲಿದೆ.
ಅಸ್ಟ್ರೇಲಿಯದ ಪರ್ತ್ನಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯ ಆಗುವ ಸಾಧ್ಯತೆ ಇದೆ.ರೋಹಿತ್ ಶರ್ಮಾ ದಂಪತಿಯ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು, ಇದರಿಂದ ಪರ್ತ್ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಲಭ್ಯವಾಗದಿರುವ ಸಾಧ್ಯತೆಯಿದೆ. ಹೀಗಾಗಿ ರೋಹಿತ್ ಶರ್ಮಾ ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ .
ಇದಕ್ಕೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ , ರೋಹಿತ್ ಶರ್ಮಾ ಅವರು ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಭಾರತ ತಂಡದ ನಾಯಕರಾಗಿ ಜಸ್ಪ್ರೀತ್ ಬುಮ್ರಾ ಆಗಲಿದ್ದಾರೆ ಎಂದು ಗಂಭೀರ್ ತಿಳಿಸಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯ ಪರ್ತ್ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.