ಮುಂಬೈ, ನ.16(DaijiworldNews/AK):ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ದಂಪತಿ ಮನೆಗೆ ಎರಡನೇ ಅತಿಥಿಯ ಆಗಮನವಾಗಿದೆ.
ದಂಪತಿಗೆ ಈಗಾಗಲೇ ಸಮೈರಾ ಹೆಸರಿನ 6 ವರ್ಷದ ಮಗಳಿದ್ದಾಳೆ. ಪರ್ತ್ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ರೋಹಿತ್ ಲಭ್ಯತೆ ಸಂದೇಹವಿತ್ತು. ಆದರೆ, ಈಗ ಪತ್ನಿಗೆ ಗಂಡು ಮಗು ಜನಿಸಿದ್ದು, ಟೀಂ ಇಂಡಿಯಾ ನಾಯಕ ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಬಹುದು ಎಂದು ಹೇಳಲಾಗಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ರೋಹಿತ್ ಆಸ್ಟ್ರೇಲಿಯಾಕ್ಕೆ ಬರಲು ಸಾಧ್ಯವಾಗದಿದ್ದರೆ ಜಸ್ಪ್ರೀತ್ ಬುಮ್ರಾ ತಂಡವನ್ನು ನಾಯಕನಾಗಿ ಮುನ್ನಡೆಸುವುದು ಖಚಿತವಾಗಿದೆ.ಕ್ರಿಕೆಟಿಗ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನಿಸಿರುವುದಕ್ಕೆ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.