ಮುಂಬೈ,ನ.19(DaijiworldNews/AK): ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಬಿಸಿಸಿಐ ಆಟಗಾರ್ತಿಯರ ತಂಡವನ್ನು ಪ್ರಕಟಿಸಿದ್ದು, ಶಫಾಲಿ ವರ್ಮಾ ಹಾಗೂ ಶ್ರೇಯಾಂಕಾ ಪಾಟೀಲ್ನ್ನು ಕೈಬಿಟ್ಟಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ತನ್ನ ಎಕ್ಸ್ ಖಾತೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ 15 ಸ್ಪರ್ಧಿಗಳನ್ನು ಪ್ರಕಟಿಸಿದೆ.
ಡಿ.5 ರಿಂದ 11 ರವರೆಗೆ ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಿಸಿಸಿಐ ಮಂಗಳವಾರ (ನ.19) ಆಟಗಾರ್ತಿಯರ ಪಟ್ಟಿಯನ್ನು ಪ್ರಕಟಿಸಿದೆ.ಡಿ.5 ಹಾಗೂ ಡಿ.8 ರಂದು ಮೊದಲ ಎರಡು ಪಂದ್ಯಗಳು ಆಸ್ಟ್ರೇಲಿಯಾದ ಬ್ರಿಸ್ಬೇನ್ನ ಅಲನ್ ಬಾರ್ಡರ್ ಫೀಲ್ಡ್ನಲ್ಲಿ. ಡಿ.11 ರಂದು ಫೈನಲ್ ಪಂದ್ಯ ವೆಸ್ಟರ್ನ್ ಆಸ್ಟ್ರೇಲಿಯನ್ ಕ್ರಿಕೆಟ್ ಅಸೋಸಿಯನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ತಂಡ:
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಪ್ರಿಯಾ ಪುನಿಯಾ, ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ಯಾಸ್ತಿಕಾ ಭಾಟಿಯಾ (ವಿಕೇಟ್ ಕೀಪರ್), ರಿಚಾ ಘೋಷ್ (ವಿಕೆಟ್ ಕೀಪರ್), ತೇಜಲ್ ಹಸಬ್ನಿಸ್, ದೀಪ್ತಿ ಶರ್ಮಾ, ಮಿನ್ನು ಮಣಿ , ಪ್ರಿಯಾ ಮಿಶ್ರಾ, ರಾಧಾ ಯಾದವ್, ಟಿಟಾಸ್ ಸಾಧು, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಸೈಮಾ ಠಾಕೂರ್.