ದುಬೈ, ಫೆ.20 (DaijiworldNews/AK): 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯ ಆಡಲಿದೆ. ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡ ಟೂರ್ನಿಯಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಇಂದು ತನ್ನ ಮೊದಲ ಪಂದ್ಯದೊಂದಿಗೆ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಬಾಂಗ್ಲಾದೇಶ ರುದ್ಧ ಮೊದಲ ಪಂದ್ಯವಾಡಲಿರುವ ರೋಹಿತ್ ಪಡೆ, 2025ರ ಐಸಿಸಿ ಟೂರ್ನಿಯಲ್ಲಿ ಶುಭಾರಂಭದ ಕುತೂಹಲ ಇದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ.ಭಾರತ ತಂಡದ ಬ್ಯಾಟಿಂಗ್ ನಲ್ಲಿ ಶುಭಮನ್ ಗಿಲ್ . ಕೆ.ಎಲ್ ರಾಹುಲ್, ಶ್ರೇಯಸ್ ಐಯರ್ ಬಲ ತುಂಬಲಿದ್ದಾರೆ. ಇತ್ತ ಬೌಲಿಂಗ್ನಲ್ಲಿ ಬುಮ್ರಾ ಅನುಪಸ್ಥಿತಿ ಕೊಂಚ ಕಾಡುವ ಸಾಧ್ಯತೆ ಇದೆ. ಈಗಷ್ಟೇ ಗಾಯದ ಸಮಸ್ಯೆಯಿಂದ ವಾಪಸ್ ಆಗಿರೋ ಮೊಹಮ್ಮದ್ ಶಮಿ ಬೌಲಿಂಗ್ ಪಡೆ ಮುನ್ನಡಸಲಿದ್ದಾರೆ.
ಇತ್ತ ಬಾಂಗ್ಲಾದೇಶ ತಂಡ ಕೂಡ ಬಲಿಷ್ಠವಾಗಿಯೇ ಇದೆ. ಐಸಿಸಿ ಟೂರ್ನಿಯಲ್ಲಿ ಭಾರತದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ತಂಡವನ್ನ ಕಡೆಗಣಿಸುವಂತಿಲ್ಲ. ಹಿರಿಯ ಮತ್ತು ಯುವ ಆಟಗಾರರ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ಪಡೆ ಕೂಡ ಕಾತರೆಯಿಂದ ಎದುರು ನೋಡುತ್ತಿದೆ.