ಮುಂಬೈ, ಫೆ.26(DaijiworldNews/AK):ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಯೋತ್ಪಾದಕರ ಭೀತಿ . ಐಎಸ್ಕೆಪಿ ಭಯೋತ್ಪಾದಕ ಗುಂಪು ಚಾಂಪಿಯನ್ಸ್ ಟ್ರೋಫಿಯನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಬಂದಿರುವ ವಿದೇಶಿಗರನ್ನು ಅಪಹರಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದ ಮಧ್ಯೆ ನ್ಯೂಝಿಲೆಂಡ್-ಬಾಂಗ್ಲಾದೇಶ್ ನಡುವಣ ಪಂದ್ಯದ ವೇಳೆ ಭಯೋತ್ಪಾದಕ ನಾಯಕನ ಬೆಂಬಲಿಗನೊಬ್ಬ ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ.

ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್ ವೇಳೆ ಯುವಕನೋರ್ವ ತೆಹ್ರೀಕ್-ಇ-ಲಬ್ಬೈಕ್ ಪಕ್ಷದ ನಾಯಕ ಸಾದ್ ರಿಝ್ವಿಯ ಫೋಟೋ ಹಿಡಿದು ಮೈದಾನಕ್ಕೆ ನುಗ್ಗಿದ್ದ.
ಅಲ್ಲದೆ ನೇರವಾಗಿ ಬ್ಯಾಟ್ ಮಾಡುತ್ತಿದ್ದ ನ್ಯೂಝಿಲೆಂಡ್ ಆಟಗಾರ ರಚಿನ್ ರವೀಂದ್ರ ಅವರನ್ನು ತಬ್ಬಿಕೊಳ್ಳಲು ಯತ್ನಿಸಿದ್ದಾರೆ. ಹೀಗಾಗಿ ರಚಿನ್ ರವೀಂದ್ರ ಭಯಭೀತರಾದರು. ಅಷ್ಟರಲ್ಲಾಗಲೇ ಮೈದಾನಕ್ಕೆ ಆಗಮಿಸಿದ ಭದ್ರತಾ ಸಿಬ್ಬಂದಿಗಳು ಯುವಕನನ್ನು ವಶಕ್ಕೆ ಪಡೆದಿದ್ದಾರೆ.