ದುಬೈ, ಮಾ.06(DaijiworldNews/AK):ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅದ್ಭುತ ಫೀಲ್ಡಿಂಗ್ ಪ್ರದರ್ಶಿಸಿದ್ದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಪೋಟಕ ಇನಿಂಗ್ಸ್ ಆಡಿದ್ದ ಅಲೆಕ್ಸ್ ಕ್ಯಾರಿಯನ್ನು ಔಟ್ ಮಾಡುವಲ್ಲಿ ಶ್ರೇಯಸ್ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.
57 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸ್ನೊಂದಿಗೆ 61 ರನ್ ಬಾರಿಸಿದ್ದ ಅಲೆಕ್ಸ್ ಕ್ಯಾರಿ ಕೊನೆಯ ಓವರ್ಗಳ ವೇಳೆ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಆದರೆ 48ನೇ ಓವರ್ನ ಮೊದಲ ಎಸೆತದಲ್ಲಿ ಶ್ರೇಯಸ್ ಅಯ್ಯರ್ ಎಸೆದ ಡೈರೆಕ್ಟ್ ಥ್ರೋನಿಂದಾಗಿ ಅಲೆಕ್ಸ್ ಕ್ಯಾರಿ ರನ್ ಔಟ್ ಆದರು. ಈ ರನೌಟ್ನಿಂದಾಗಿ ಆಸ್ಟ್ರೇಲಿಯಾ ತಂಡದ ರನ್ ಗತಿಯು ಇಳಿಮುಖವಾಯಿತು.
ಇದೀಗ ಈ ಅದ್ಭುತ ಫೀಲ್ಡಿಂಗ್ಗೆ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾದ ಬೆಸ್ಟ್ ಫೀಲ್ಡರ್ ಪ್ರಶಸ್ತಿ ಪಡೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಬಳಿಕ ನಡೆದ ಡ್ರೆಸ್ಸಿಂಗ್ ರೂಮ್ ಸಂಭ್ರಮದ ವೇಳೆ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅವರು ಶ್ರೇಯಸ್ ಅಯ್ಯರ್ ಅವರಿಗೆ ಫೀಲ್ಡರ್ ಆಫ್ ದಿ ಮ್ಯಾಚ್ ಮೆಡಲ್ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.