ಕೋಲ್ಕತ್ತಾ, ಮಾ.22 (DaijiworldNews/AA): ಐಪಿಎಲ್ನ 18 ನೇ ಆವೃತ್ತಿ ಇಂದಿನಿಂದ ಪ್ರಾರಂಭವಾಗಲಿದ್ದು, ಸೀಸನ್ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಆದರೆ ಇಂದು ನಡೆಯುವ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ.

ಈ ಪಂದ್ಯ ಕೋಲ್ಕತ್ತಾದ ತವರು ಮೈದಾನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಾಗಿದೆ. ಶುಕ್ರವಾರ ಕೋಲ್ಕತ್ತಾದಲ್ಲಿ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಅದರಂತೆ ಕೋಲ್ಕತ್ತಾದಲ್ಲಿ ಇಂದು ಕೂಡ ಮಳೆಯಾಗುತ್ತಿದೆ. ಸದ್ಯ ಕೋಲ್ಕತ್ತಾದಲ್ಲಿ ಯಾವ ಪರಿಸ್ಥಿತಿ ಎಂಬುದರ ಬಗ್ಗೆ ಟಿವಿ೯ ಗ್ರೌಂಡ್ ರಿಪೋರ್ಟ್? ನೀಡುತ್ತಿದೆ.
ಕೆಕೆಆರ್-ಆರ್ಸಿಬಿ ನಡುವಿನ ಮೊದಲ ಪಂದ್ಯವು ಕೋಲ್ಕತ್ತಾದ ತವರು ಮೈದಾನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಶುಕ್ರವಾರ ಕೋಲ್ಕತ್ತಾದಲ್ಲಿ ಮಳೆಯಾಗಿದ್ದು, ಇಂದು ಬೆಳಗ್ಗೆಯಿಂದಲೇ ಕೋಲ್ಕತ್ತಾದಲ್ಲಿ ಜಿಟಿಜಿಟಿ ಮಳೆಯಾಗುತ್ತಲೇ ಇದೆ. ಇದೇ ರೀತಿಯ ಮಳೆ ರಾತ್ರಿಯು ಸುರಿಯುವ ಸಾಧ್ಯತೆಯಿದೆ. ರಾತ್ರಿ ಮಳೆ ಸುರಿಯುವ ಸಾಧ್ಯತೆ 20% ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನ ಐಪಿಎಲ್ ಪಂದ್ಯವು 7:30ಕ್ಕೆ ಆರಂಭವಾಗಲಿದ್ದು, ಪಂದ್ಯಕ್ಕೂ ಮುನ್ನ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಶಾರೂಖ್ ಖಾನ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಪ್ರದರ್ಶನ ನೀಡಲಿದ್ದಾರೆ. ಸಂಜೆ 6 ರಿಂದ ಸಂಜೆ 7 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ.