ಮುಂಬೈ, ಏ.16 (DaijiworldNews/AA): ಇದೇ ಮೊದಲ ಬಾರಿಗೆ ಭಾರತ ತಂಡ ಏಕದಿನ ಮತ್ತು ಟಿ20 ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ.

ಐಪಿಎಲ್ 2025ರ ನಂತರ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಮಾಡಲಿದೆ. ಈ ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಇದಾದ ಬೆನ್ನಲ್ಲೇ ಟೀ ಇಂಡಿಯಾ ಏಕದಿನ ಮತ್ತು ಟಿ20 ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಭಾರತ ತಂಡದ ಈ ಪ್ರವಾಸವು ಆಗಸ್ಟ್ 17 ರಿಂದ ಪ್ರಾರಂಭವಾಗಲಿದ್ದು, ಕೊನೆಯ ಪಂದ್ಯ ಆಗಸ್ಟ್ 31 ರಂದು ನಡೆಯಲಿದೆ. ಇದು ಬಾಂಗ್ಲಾದೇಶದಲ್ಲಿ ಟೀಂ ಇಂಡಿಯಾದ ಮೊದಲ ಟಿ20 ಸರಣಿಯಾಗಿದೆ.