ನವದೆಹಲಿ, ಜು13(Daijiworld News/SS): ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಭಾರತೀಯ ಜನತಾ ಪಕ್ಷವನ್ನು ಸೇರಿ ರಾಜಕೀಯದಲ್ಲಿ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಟೀಂ ಇಂಡಿಯಾದ ಮಾಜಿನಾಯಕ, ವಿಕೆಟ್ ಕೀಪರ್ ಅಂತಾರಾಷ್ಟ್ರೀಯ ಕ್ರಿಕೆಟ್ನ ವೃತ್ತಿ ಬದುಕಿಗೆ ವಿದಾಯ ಹೇಳುವ ಅಂಚಿನಲ್ಲಿದ್ದಾರೆ. ಧೋನಿ ಶೀಘ್ರದಲ್ಲಿಯೇ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಅವರು ನಿವೃತ್ತಿ ಬಳಿಕ ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಎಂ.ಎಸ್.ಧೋನಿಯ ಭೇಟಿ ಮಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸಂಜಯ್ ಪಾಸ್ವಾನ್ ಹೇಳಿಕೆ ನೀಡಿದ್ದಾರೆ. ಧೋನಿ ಅವರು ಪಕ್ಷವನ್ನು ಸೇರುವ ಸಂಭವವಿದ್ದು, ಈ ವಿಚಾರದ ಬಗ್ಗೆ ಸುದೀರ್ಘ ಸಮಯದಿಂದ ಚರ್ಚೆ ನಡೆಯುತ್ತಿದೆ. ಸುದೀರ್ಘ ಸಮಯದಿಂದ ಧೋನಿ ಗೊತ್ತು. ನಿವೃತ್ತಿಯ ಬಳಿಕ ಅವರು ಪಕ್ಷವನ್ನು ಸೇರಲಿದ್ದಾರೆ ಎಂಬ ಭರವಸೆ ಇದೆ ಎಂದು ಅವರು ಹೇಳಿದ್ದಾರೆ.
ಎಂಎಸ್ ಧೋನಿ ನನ್ನ ಸ್ನೇಹಿತ. ಅವರು ಜಗದ್ವಿಖ್ಯಾತ ಆಟಗಾರ. ಅವರನ್ನು ಪಕ್ಷದೊಳಗೆ ಕರೆದುಕೊಂಡು ಬರಲು ಆಲೋಚನೆಗಳು, ಚರ್ಚೆಗಳು ನಡೆಯುತ್ತಲೇ ಇವೆ. ನಿವೃತ್ತಿ ಬಳಿಕ ನಿರ್ಧಾರ ಹಲವು ಸಮಯದಿಂದ ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೂ ಈ ನಿರ್ಧಾರವನ್ನು ಅವರು ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕವಷ್ಟೇ ತೆಗೆದುಕೊಳ್ಳಲಾಗುತ್ತದೆ ಎಂದು ಸಂಜಯ್ ಪಾಸ್ವಾನ್ ಹೇಳಿದ್ದಾರೆ.
ನಿವೃತ್ತರಾದ ಬಳಿಕ ಎಂಎಸ್ ಧೋನಿ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಹೊಸ ಆಟವಾಡಲಿದ್ದಾರೆ. ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿ ದೆಹಲಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದಾರೆ. ಹಾಗೆಯೇ ಧೋನಿ ಅವರೂ ಬಿಜೆಪಿ ಮೂಲಕ ರಾಜಕೀಯಕ್ಕೆ ಬರಲಿದ್ದಾರೆ ಎಂಬ ವದಂತಿ ಹರಡಿದೆ.