ನವದೆಹಲಿ, ಜು17(Daijiworld News/SS): ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಇದ್ದರಿಂದ ಮನನೊಂದ ಹಿಮಾದಾಸ್ ಪ್ರವಾಹ ಪೀಡಿತರಿಗೆ ನೆರವಾಗುವಂತೆ ಕೇಂದ್ರ ಸರ್ಕಾರ ಹಾಗೂ ಕಾರ್ಪೊರೇಟ್ ಕಂಪನಿಗಳನ್ನು ಕೋರಿದ್ದಾರೆ.
ಅಸ್ಸಾಂ ರಾಜ್ಯ ತೀವ್ರ ಪ್ರವಾಹಕ್ಕೆ ಸಿಲುಕಿ ನಲುಗಿರುವ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವವರಿಗೆ ನೆರವಾಗಲು, ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿಮಾ ದಾಸ್ ತನ್ನ ವೇತನದ ಅರ್ಧ ಭಾಗವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದಾರೆ. ಜತೆಗೆ ದೇಶದ ಶ್ರೀಮಂತ ವ್ಯಕ್ತಿಗಳು ಹಾಗೂ ಜನ ಸಾಮಾನ್ಯರು ತನ್ನ ತವರಿನ ಜನರ ಸಂಕಷ್ಟಕ್ಕೆ ಉದಾರ ನೆರವು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ನನ್ನ ರಾಜ್ಯದ 33 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಜನರ ಪರಿಸ್ಥಿತಿ ಹೇಳಲಾರದ ಸ್ಥಿತಿ ತಲುಪಿದೆ. ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ. ದಯವಿಟ್ಟು ನೀವು ಸಹಾಯ ಮಾಡಿ ಸಂತ್ರಸ್ತರಿಗೆ ನೆರವಾಗಿ ಎಂದು ವಿನಂತಿಸಿಕೊಂಡಿದ್ದಾರೆ.