ನವದೆಹಲಿ, ಸೆ 02 (DaijiworldNews/SM): ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ಮತ್ತೆ ಸಂಕಷ್ಟ ಎದುರಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಸದ್ಯ ವಿಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ನಡೆಸುತ್ತಿರುವ ಅವರಿಗೆ ಕೋರ್ಟ್ ಬಂಧನದ ವಾರೆಂಟ್ ಜಾರಿ ಮಾಡಿದೆ.
ಶಮಿ ಪತ್ನಿ ಹಸೀನ್ ಜಹಾನ್ ಈ ಹಿಂದೆ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಮತ್ತೆ ಜೀವಪಡೆದುಕೊಂಡಿದೆ. ಕೌಟುಂಬಿಕ ದೌರ್ಜನ್ಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಅಲಿಪೋರ್ ಕೋರ್ಟ್ ಶಮಿ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಿದೆ.
ಸಮಿ ವಿರುದ್ಧ ತೊಡೆ ತತ್ತಿನಿಂತ ಅವರ ಪತ್ನಿ ಕೋರ್ಟ್ ಮೆಟ್ಟಿಲೇರಿದ ಬಳಿಕ ಅವರಿಗೆ ಕೋರ್ಟ್ ಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ, ಅವರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ. 15 ದಿನಗಳ ಒಳಗಾಗಿ ಕೋರ್ಟ್ ಗೆ ಹಾಜರಾಗುವಂತೆ ವಾರಂಟ್ ನಲ್ಲಿ ಉಲ್ಲೇಖಿಸಲಾಗಿದೆ.
ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ವಿಂಡೀಸ್ ಪ್ರವಾಸ ಮೊಟಕುಗೊಳಿಸಿ ಶಮಿ ತವರಿಗೆ ಮರಳಾಬೇಕಾದ ಅನಿವಾರ್ಯತೆ ಎದುರಾಗಿದೆ.