ವಿಶಾಖಪಟ್ಟಣಂ, ಅ 06 (DaijiworldNews/SM): ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದೆ. ಟೀಂ ಇಂಡಿಯಾದ ಬೌಲರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಕೊನೆಯ ದಿನ 9 ವಿಕೆಟ್ ಗಳನ್ನು ಉರುಳಿಸಿದ್ದಾರೆ. ಆ ಮೂಲಕ ಪಂದ್ಯವನ್ನು ತನ್ನದಾಗಿಸಿಕೊಂಡಿದ್ದಾರೆ.
ವಿಶಾಖಪಟ್ಟಣಂನ ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಐದನೇ ದಿನ ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಮಾರಕ ಬೌಲಿಂಗ್ ಮಡೆಸಿದರು. ಹಾಗೂ 9 ವಿಕೆಟ್ ಗಳನ್ನು ಕಿತ್ತು ಸಂಭ್ರಮಿಸಿದರು.
ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 502 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಬಳಿಕ ದಕ್ಷಿಣ ಆಫ್ರಿಕಾ ತಂಡ 431 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 71 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ 323 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಆಫ್ರಿಕಾಗೆ 395 ರನ್ ಗಳ ಗುರಿ ನೀಡಿತ್ತು.
ಕೊನೆಯ ದಿನ ಈ ಬೃಹತ್ ಮೊತ್ತ ಬೆನ್ನಟ್ಟಿದ ಆಫ್ರಿಕಾ ತಂಡಕ್ಕೆ ಭಾರತೀಯ ಬೌಲರ್ ಗಳು ಕಾಡಿದರು. ಟೀಂ ಇಂಡಿಯಾ ಬೌಲರ್ ಗಳು ಶಾಕ್ ನೀಡಿದರು. ಕೇವಲ 191 ರನ್ ಗಳಿಗೆ ಆಫ್ರಿಕಾ ತಂಡವನ್ನು ಆಲೌಟ್ ಮಾಡುವ ಮೂಲಕ ಮೊದಲ ಪಂದ್ಯವನ್ನು ತಮ್ಮ ವಶಕ್ಕೆ ಪಡೆದುಕೊಂಡರು. ಮೊದಲ ಪಂದ್ಯದಲ್ಲಿ ಭಾರತ 203 ರನ್ ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.