ನವದೆಹಲಿ, ಅ 08 (DaijiworldNews/SM): ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ತನ್ನ ಸಾಮಾರ್ಥ್ಯ ಪ್ರದರ್ಶನ ಮಾಡಿದ್ದಾರೆ.ಈ ಪಂದ್ಯದಲ್ಲಿ ದಾಖಲೆಯ ಸಿಕ್ಸರ್ ಸಿಡಿಸಿದ್ದ ಹೆಗ್ಗಳಿಕೆ ರೋಹಿತ್ ಪಾಲಿಗೆ ಸಲ್ಲುತ್ತದೆ. ಅದರೊಂದಿಗೆ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಸರ್ವಶ್ರೇಷ್ಛ ಸಾಧನೆ ಗೈದಿದ್ದಾರೆ.
ಐಸಿಸಿ ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಭಾರೀ ಜಿಗಿತ ಕಂಡಿದ್ದಾರೆ. ವೃತ್ತಿ ಜೀವನದ ಶ್ರೇಷ್ಠ ಟೆಸ್ಟ್ ರ್ಯಾಂಕಿಂಗ್ ಸ್ಥಾನ ಪಡೆದ ಸಾಧನೆಯನ್ನು ರೋಹಿತ್ ಮಾಡಿದ್ದಾರೆ. ಈಗಾಗಲೇ ಐಸಿಸಿ ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ರೋಹಿತ್ ಶರ್ಮಾ 36 ಸ್ಥಾನ ಮೇಲಕ್ಕೇರಿದ್ದಾರೆ. ಆ ಮೂಲಕ ರೋಹಿತ್ 17ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 176 ಮತ್ತು ಎರಡನೇ ಇನಿಂಗ್ಸ್ ನಲ್ಲಿ 127 ರನ್ ಸಿಡಿಸಿದ್ದ ರೋಹಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ಅಲ್ಲದೆ ರೋಹಿತ್ ಸಾಹಸದ ಬ್ಯಾಟಿಂಗ್ ನಿಂದ ಟೀಂ ಇಂಡಿಯಾ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯೊಂದಿಗೆ ಮುನ್ನಡೆ ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಅತ್ಯಧಿಕ ೩೬ ಸಿಕ್ಸರ್ ಗಳನ್ನು ಸಿಡಿಸಲಾಗಿದೆ. ಈ ಪೈಕಿ ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ 13 ಸಿಕ್ಸರ್ ಬಾರಿಸಿ 1996ರಲ್ಲಿ ಜಿಂಬಾಬ್ವೆ ವಿರುದ್ಧ ವಾಸಿಂ ಅಕ್ರಮ್ ಗಳಿಸಿದ್ದ 12 ಸಿಕ್ಸರ್ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.