ಹೈದರಾಬಾದ್, ಡಿ 07 (DaijiworldNews/SM): ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಆ ಮೂಲಕ ತಮ್ಮ ಸ್ಥಾನವನ್ನು ಭದ್ರಗೊಳಿಸಲು ಮುಂದಾಗಿದ್ದಾರೆ. ಇದೀಗ ಪ್ರತಿಕ್ರಿಯೆ ನೀಡಿರುವ ಅವರು, ತನಗೆ ಸಿಕ್ಕಿರುವ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಮೊದಲ ಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳಿಂದ ವಿಂಡೀಸ್ ತಂಡವನ್ನು ಮಣಿಸಿತ್ತು. ಮೂರು ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಎರಡು ಪಂದ್ಯಗಳು ಬಾಕಿ ಉಳಿದುಕೊಂಡಿವೆ. ಧವನ್ ಅವರು ಗಾಯಕ್ಕೆ ತುತ್ತಾಗಿದ್ದರಿಂದ ರಾಹುಲ್ ಅವರು ಆರಂಭಿಕರಾಗಿ ಅವಕಾಶ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾನು ಸಿಕ್ಕಿರುವ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಮೊದಲ ಟಿ20 ಪಂದ್ಯದಲ್ಲೇ ಕೆಎಲ್ ರಾಹುಲ್ ಅವರು 40 ಎಸೆತದಲ್ಲಿ 62 ರನ್ ಪೇರಿಸಿ ತಂಡದ ಗೆಲುವಿನಲ್ಲಿ ಪ್ರಮುಖರೆನಿಸಿಕೊಂಡಿದ್ದರು.