ವಿಶಾಖಪಟ್ಟಣಂ, ಡಿ 17 (DaijiworldNews/SM): ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲನುಭವಿಸಿದ ಭಾರತಕ್ಕೆ ಎರಡನೇ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಮೊದಲ ಪಂದ್ಯದಲ್ಲಿ ಸೋತು ತವರು ಅಭಿಮಾನಿಗಳ ಎದುರು ಮುಖಭಂಗ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ 2ನೇ ಪಂದ್ಯ ಗೆಲ್ಲುವುದು ಟೀಂ ಇಂಡಿಯಾಕ್ಕೆ ಅನಿವಾರ್ಯವಾಗಿದೆ. ಸರಣಿಯನ್ನು ಜೀವಂತವಾಗಿ ಉಳಿಸಲು ಎರಡನೇ ಪಂದ್ಯದಲ್ಲಿ ಜಯ ಗಳಿಸುವುದು ಅಗತ್ಯವಾಗಿದೆ.
ಡಿಸೆಂಬರ್ ೧೩ರ ಬುಧವಾರದಂದು ಇಲ್ಲಿನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ನಡೆಯಲಿದೆ. ನಡೆಯುವ ಎರಡನೇ ಹಣಾಹಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲು ಸಿದ್ಧವಾಗಿದೆ. ಈಗಾಗಲೇ 0-1 ಹಿನ್ನಡೆ ಅನುಭವಿಸಿರುವ ಭಾರತ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡ್ಕಕೆ ಸಿಲುಕಿದೆ.
ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಸರಣಿ ಸೋಲಿನಿಂದ ತಪ್ಪಿಸಿಕೊಳ್ಳಬೇಕಾದರೆ ಎಂಟನೇ ಸ್ಥಾನದ ವೆಸ್ಟ್ ಇಂಡೀಸ್ ವಿರುದ್ಧ ನಾಳೆ ಗೆಲ್ಲುವುದು ಅನಿವಾರ್ಯವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಟೀಂ ಇಂಡಿಯಾ ವಿಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಮುಗ್ಗರಿಸಿತ್ತು. ಆದರೆ, ಬುಧವಾರದ ಪಂದ್ಯ ಗೆಲ್ಲಲು ಎಲ್ಲಾ ರೀತಿಯ ಕಸರತ್ತನ್ನು ನಡೆಸಿದೆ.
ಈಗಾಗಲೇ ಬೌಲಿಂಗ್ ಹಾಗೂ ಬ್ಯಾಟಿಂದ್ ವಿಭಾಗದಲ್ಲಿ ನಡೆಸಿರುವ ತಪ್ಪುಗಳನ್ನು ಈ ಪಂದ್ಯದಲ್ಲಿ ತಿದ್ದಿಕೊಳ್ಳುವುದು ಭಾರತ ತಂಡಕ್ಕೆ ಅನಿವಾರ್ಯವಾಗಿದೆ. ಒಂದೊಮ್ಮೆ ಅದೇ ಪರಿಸ್ಥಿತಿಯಲ್ಲಿದ್ದರೆ, ಟೀಂ ಇಂಡಿಯಾಕ್ಕೆ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ. ಮತ್ತೊಂದೆಡೆ ವಿಂಡೀಸ್ ತಂಡ ಮೊದಲ ಪಂದ್ಯದಲ್ಲಿ ಗೆದ್ದಿದ್ದು, ಇದೇ ಆತ್ಮವಿಶ್ವಾಸವನ್ನು ಹೊಂದಿಕೊಂಡಿದೆ.
ಆದರೆ, ಟೀಂ ಇಂಡಿಯಾ ಈ ಹಿಂದೆ ಮಾಡಿದ ತಪ್ಪುಗಳಿಂದ ಸೂಧಾರಿಸಿಕೊಂಡು ಎರಡನೇ ಪಂದ್ಯಕ್ಕೆ ಮೈದಾನಕ್ಕೆ ಇಳಿದಲ್ಲಿ ಗೆಲುವು ಸನಿಹವಿರಲಿದೆ.