ನವದೆಹಲಿ, ಮೇ 10 (DaijiworldNews/SM): ಭಾರತೀಯ ಹಾಕಿ ಕ್ರೀಡೆಯ ದಂತಕತೆ ಬಲ್ಬೀರ್ ಸಿಂಗ್ (96) ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ತೀವ್ರ ಅಸ್ವಸ್ಥಗೊಂಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಸ್ವಾಭಾವಿಕವಾಗಿ ಉಸಿರಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ. ಚಂಡಿಗಢದಲ್ಲಿ ಪುತ್ರಿ ಹಾಗೂ ಮೊಮ್ಮಗನೊಂದಿಗೆ ವಾಸವಾಗಿರುವ ಬಲ್ಬೀರ್ ಸಿಂಗ್, ನ್ಯೂಮೊನಿಯದ ಜತೆಗೆ ಅಧಿಕ ಜ್ವರದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಸದ್ಯ ತೀವ್ರ ನಿಗಾ ವಹಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.