ನವದೆಹಲಿ, ಆ. 02 (DaijiworldNews/SM): ಕೊರೊನಾ ಕಾರಣದಿಂದಾಗಿ ದೇಶದಲ್ಲಿ ನಡೆಯಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲ್ಪಟ್ಟ ಬಳಿಕ ಅದರ ಸಾರಥ್ಯ ವಹಿಸಲು ಯುಎಇ ಮುಂದಾಗಿದ್ದು, ಇದಕ್ಕೆ ಭಾರತ ಸರಕಾರದಿಂದ ಸಮ್ಮತಿ ಸಿಕ್ಕಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆಯೋಜನೆಗೊಂಡಿದೆ. ವಿದೇಶಗಳಲ್ಲಿ ಐಪಿಎಲ್ ಟೂರ್ನಿ ಆಯೋಜಿಸಲು ಬಿಸಿಸಿಐಗೆ ಕೇಂದ್ರ ಸರಕಾರದ ಅನುಮತಿ ಅಗತ್ಯವಾಗಿದೆ. ಈ ಕುರಿತಂತೆ ಅನುಮತಿ ನೀಡಲು ಕೇಂದ್ರ ಸರಕಾರಕ್ಕೆ ಬಿಸಿಸಿಐ ಮನವಿ ಸಲ್ಲಿಸಿತ್ತು. ಇದಕ್ಕೆ ಕೇಂದ್ರ ಸರಕಾರ ಸಮ್ಮತಿಸಿದೆ. ಈ ಕುರಿತು ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಟೂರ್ನಿಯ ಕುರಿತು ವಿಸ್ತೃತ ವಿವರಗಳನ್ನು ನೀಡಲಾಗಿದೆ.