ನವದೆಹಲಿ, ಆ. 15 (DaijiworldNews/MB) : ಭಾರತ ತಂಡದ ಮಾಜಿ ನಾಯಕ ಹಾಗೂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರು ಸ್ವಾತಂತ್ಯ್ರೋತ್ಸವವಾದ ಆಗಸ್ಟ್ 15 ಶನಿವಾರದಂದು ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
ಈ ಬಗ್ಗೆ ಅವರು ತಮ್ಮ ಇನ್ಸ್ಸ್ಟಾಗ್ರಾಂನಲ್ಲಿ ಮಾಹಿತಿ ನೀಡಿದ್ದು, "ನನ್ನ ವೃತ್ತಿ ಜೀವನದಲ್ಲಿ ನೀವು ನೀಡಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ತುಂಬಾ ಧನ್ಯವಾದಗಳು. 1929 ಗಂಟೆಗಳ ಬಳಿಕ ನಾನು ನಿವೃತ್ತಿ ಹೊಂದುತ್ತಿದ್ದೇನೆ" ಎಂದು ಪೋಸ್ಟ್ ಮಾಡಿದ್ದಾರೆ.
ಎರಡು ಬಾರಿ ವಿಶ್ವಕಪ್ ವಿಜೇತ ನಾಯಕ ಎಂಎಸ್ ಧೋನಿಯವರು ಯಾವ ದಿನದಂದು ತನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ಸ್ಪಷ್ಟ ಮಾಹಿತಿಯನ್ನು ನೀಡಿಲ್ಲವಾದರೂ ಕೂಡಾ 1929 ಗಂಟೆಗಳ ಬಳಿಕ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.
ಇನ್ನು ಅವರು ಯುಎಇಯಲ್ಲಿ ಸೆ.19ರಿಂದ ಆರಂಭವಾಗುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಡುವ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿಯಾಗಿದೆ.