ನವದೆಹಲಿ, ಅ. 23 (DaijiworldNews/MB) : ಭಾರತಕ್ಕೆ ಪ್ರಥಮ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಪ್ರಸಿದ್ದ ಕ್ರಿಕೆಟಿಗ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ಗೆ ಹೃದಯಾಘಾತವಾಗಿದ್ದು ನವದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರಲ್ಲಿ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಕ್ರಿಯವಾಗಿದ್ದರು.
ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ಕೂಡಾ ಅವರು ಹೊಂದಿದ್ದಾರೆ ಎಂದು ಹೇಳಲಾಗಿದೆ.
ಭಾರತದ ಶ್ರೇಷ್ಠಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಅವರು 1983 ರಲ್ಲಿ ಭಾರತಕ್ಕೆ ವಿಶ್ವಕಪ್ ಗೆಲ್ಲುವುದಕ್ಕೆ ಕಾರಣೀಕರ್ತರು ಆಗಿದ್ದಾರೆ.