ಅಬುಧಾಬಿ, ಅ. 23 (DaijiworldNews/SM): ಇಲ್ಲಿನ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಸರಣಿ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೊಮ್ಮೆ ಬ್ಯಾಟಿಂಗ್ ವಿಭಾಗದಲ್ಲಿ ವೈಫಲ್ಯ ಕಂಡಿದ್ದು, ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 115 ರನ್ ಗಳ ಸಾಧಾರಣ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಯಲ್ಪಟ್ಟ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಗಾಯಕ್ವಾಡ್ ಖಾತೆ ತೆರೆಯದೆ ನಿರ್ಗಮಿಸಿದರೆ, ಡ್ಯುಪ್ಲೆಸಿಸ್ ಒಂದು, ರಾಯುಡ್ ಎರಡು ರನ್ ಗಳಿಸಿ ಮತ್ತೊಮ್ಮೆ ವಿಫಲರಾದರು. ಈ ನಡುವೆ ಸ್ಯಾಮ್ ಕರಣ್ ತಂಡಕ್ಕೆ ನೆರವಾಗಿದ್ದು ೫೨ ರನ್ ಗಳನ್ನು ಸಿಡಿಸಿದರು. ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿದರು.