ನವದೆಹಲಿ, ಅ.25 (DaijiworldNews/PY): ಹೃದಯಾಘಾತದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ (61) ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಶುಕ್ರವಾರದಂದು ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಿಗೆ ಆಯಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯ ಕಪಿಲ್ ದೇವ್ ಅವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಡಾ.ಅತುಲ್ ಮಾಥುರ್ ತಿಳಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರಲ್ಲಿ ಕ್ರಿಕೆಟ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಸಕ್ರಿಯವಾಗಿದ್ದರು.
ಭಾರತದ ಶ್ರೇಷ್ಠಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಅವರು 1983 ರಲ್ಲಿ ಭಾರತಕ್ಕೆ ವಿಶ್ವಕಪ್ ಗೆಲ್ಲುವುದಕ್ಕೆ ಕಾರಣೀಕರ್ತರು ಆಗಿದ್ದಾರೆ.