ನವದೆಹಲಿ, ನ. 22 (DaijiworldNews/SM): ಟೀಂ ಇಂಡಿಯಾದ ಹಿಟ್ ಮ್ಯಾನ್ ಇತ್ತೀಚಿಗಷ್ಟೇ ಐಪಿಎಲ್ ಟಿ-20 ಗೆದ್ದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್, ಆಸಿಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸೋದಕ್ಕೆ ಸಿದ್ಧರಿದ್ದಾರೆ.
ರೋಹಿತ್ ಶರ್ಮಾ ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಟ್ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈ ವೇಳೆ ಪ್ರತಿಕ್ರಿಯೆ ನೀಡಿರುವ ಅವರು, ಇದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಯಬೇಕೆಂಬುವುದನ್ನು ನಾನು ಯೋಚಿಸಿಲ್ಲ. ಯಾವುದೇ ಕ್ರಮಾಂಕದಲ್ಲಾದರೂ ಬ್ಯಾಟಿಂಗ್ ಮಾಡುವುದಕ್ಕೆ ನಾನು ಸಿದ್ಧ ಎಂದಿದ್ದಾರೆ.
ಈ ವಿಚಾರ ಟೀಮ್ ಮ್ಯಾನೇಜ್ ಮೆಂಟ್ ಗೆ ಬಿಟ್ಟಿದ್ದಾಗಿದೆ. ಯಾವ ರೀತಿಯಲ್ಲಿ ಬದಲಾವಣೆ ಮಾಡಲಿದೆ ಎಂಬುದು ಅವರ ವಿವೇಚನೆಗೆ ಬಿಟ್ಟ ವಿಚಾರ. ಆಸ್ಟ್ರೇಲಿಯಾಕ್ಕೆ ತೆರಳಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.