ನವದೆಹಲಿ,ನ. 30 (DaijiworldNews/HR): ಕೇಂದ್ರ ಸರ್ಕಾರ ನೂತನವಾಗಿ ಜಾರಿಗೊಳಿಸಿದ ಕೃಷಿ ಕಾಯ್ದೆಗಳನ್ನು ಇಂಗ್ಲೆಂಡ್ನ ಮಾಜಿ ಕ್ರಿಕೆಟಿಗ ಮಾಂಟಿ ಪನೇಸರ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್, ಹರಿಯಾಣದ ರೈತರು ದೆಹಲಿ ಸಮೀಪದ ಸಿಂಗು ಬಾರ್ಡರ್ ಬಳಿ ಕಳೆದ ಐದು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದು, ಒಪ್ಪಂದದ ಪ್ರಕಾರ ಕೃಷಿ ಉತ್ಪನ್ನಗಳ ಗುಣಮಟ್ಟ ಇಲ್ಲವೆಂಬ ಕಾರಣವನ್ನು ಮುಂದಿಟ್ಟು ಖರೀದಿದಾರನು ಒಪ್ಪಂದಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದರೆ ಏನಾಗಬಹುದು? ಹಾಗೇನಾದರೂ ಆದರೆ, ರೈತರಿಗೆ ಯಾವ ಭದ್ರತೆ ಸಿಗುತ್ತದೆ? ಬೆಲೆ ನಿಗದಿ ಬಗ್ಗೆ ಯಾವುದೇ ಉಲ್ಲೇಖವಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಮಾಂಟಿ ಪನೇಸರ್ ಮಾಡಿರುವ ಟ್ವೀಟ್ ಅನ್ನು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ.