ಕೇಪ್ಟೌನ್,ಡಿ. 04 (DaijiworldNews/HR): ದಕ್ಷಿಣ ಆಫ್ರಿಕಾ ತಂಡದ ಮತ್ತೊಬ್ಬ ಆಟಗಾರನಿಗೆ ಕೊರೊನಾ ಸೋಂಕು ದೃಢಪಟ್ಟ ಕಾರಣ ಪ್ರವಾಸಿ ಇಂಗ್ಲೆಂಡ್ ತಂಡದ ಎದುರು ಶುಕ್ರವಾರ ನಡೆಯಬೇಕಿದ್ದ ಮೊದಲ ಏಕದಿನ ಪಂದ್ಯವನ್ನು ಭಾನುವಾರಕ್ಕೆ ಮುಂದೂಡಲಾಗಿದೆ.
ಎರಡು ತಂಡಗಳ ಆಟಗಾರರು ಹಾಗೂ ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ಎರಡೂ ಮಂಡಳಿಗಳು ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ.
ಆಟಗಾರನಿಗೆ ಕೊರೊನಾ ಹಿನ್ನಲೆಯಲ್ಲಿ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವನ್ನು ಮುಂದೂಡಲಾಗಿದೆ ಎಂದು ಕ್ರಿಕೆಟ್ ಮಂಡಳಿ ಹೇಳಿದೆ.