ನವದೆಹಲಿ,ಡಿ.12 (DaijiworldNews/HR): ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ತನ್ನ 39ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ರೈತರು ನಡೆಸುತ್ತಿರುವ ಪ್ರತಿಭಟನೆಯು ಶೀಘ್ರ ಬಗೆಹರಿಯಬೇಕು, ರೈತರು ದೇಶದ ಜೀವನಾಡಿ ಎಂಬುದು ನಿಸ್ಸಂದೇಹ. ಶಾಂತಿಯುತ ಮಾತುಕತೆಯ ಮೂಲಕ ಬಿಕ್ಕಟ್ಟು ಬಗೆಹರಿಯುವುದಾಗಿ ನಂಬಿಕೆಯಿರಿಸಿದ್ದೇನೆ' ಎಂದರು.
ಇನ್ನು "ಹುಟ್ಟುಹಬ್ಬದಂದು ಚರಿಸುವ ಬದಲು ನಮ್ಮ ರೈತರು ಹಾಗೂ ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ತ್ವರಿತ ಪರಿಹಾರ ಸಿಗಲಿ ಎಂದು ಪ್ರಾರ್ಥಿಸುತ್ತೇನೆ, ಹಾಗೂ ಸೈದ್ಧಾಂತಿಕವಾಗಿ ತಮ್ಮ ತಂದೆಯ ನಿಲುವುಗಳನ್ನು ಬೆಂಬಲಿಸುವುದಿಲ್ಲ" ಎಂದು ಯುವರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.