ನವದೆಹಲಿ, ಡಿ. 16 (DaijiworldNews/SM): ಗುರುವಾರದಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಮೊದಲ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಪಿತೃತ್ವ ರಜೆ ಪಡೆದು ತವರಿಗೆ ಮರಳಲಿದ್ದಾರೆ.
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಇಲ್ಲದಿರುವುದು ಆಸ್ಟ್ರೇಲಿಯಾ ತಂಡಕ್ಕೆ ಲಾಭವಾಗಲಿದೆ ಎಂದು ಭಾರತ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿರಾಟ್ ಆಸ್ಟ್ರೇಲಿಯಾದಲ್ಲಿ ಆಡಿದ 12 ಟೆಸ್ಟ್ ಪಂದ್ಯಗಳಲ್ಲಿ 6 ಶತಕಗಳನ್ನು ಸಿಡಿಸಿದ್ದಾರೆ. ಹಾಗಿರುವಾಗ, ಕೊಹ್ಲಿ ಮನೆಗೆ ಮರಳುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದಿದ್ದಾರೆ. ಆ ಮೂಲಕ ವಿರಾಟ್ ಕೊಹ್ಲಿಯವರ ಅಗತ್ಯತೆ ತಂಡಕ್ಕಿದೆ ಎಂಬುವುದಾಗಿ ಗಾವಸ್ಕಾರ್ ಹೇಳಿದ್ದಾರೆ.