ಅಡಿಲೇಡ್, ಡಿ. 18 (DaijiworldNews/SM): ಭಾರತೀಯ ಬೌಲರ್ ಗಳ ಆರ್ಭಟಕ್ಕೆ ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದಾರೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 191 ರನ್ ಗಳಿಗೆ ಆಲೌಟ್ ಆಗಿದೆ.
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆರಂಭದಲ್ಲಿ ಪರದಾಡಿತು. ಸಾಧಾರಣ ಮೊತ್ತ ಪೇರಿಸಲಷ್ಟೇ ಸಾಧ್ಯವಾಯಿತು. ಇದರ ಹೊರತಾಗಿ ಪಂದ್ಯದ ಮೇಲೆ ಟೀಂ ಇಂಡಿಯಾ ಹಿಡಿತ ಸಾಧಿಸಿದೆ. ಬಳಿಕ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 191 ರನ್ ಗಳಿಗೆ ಕಟ್ಟಿಹಾಕಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 244 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸಿಸ್ ತಂಡ ಭಾರತೀಯ ಬೌಲರ್ ಗಳ ಸಾಂಘಿಕ ಹೋರಾಟಕ್ಕೆ ತತ್ತರಿಸಿ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆಸಿಸ್ ಪರ ಲಾಬು ಶ್ಚಾಘ್ನೆ 47 ರನ್ ಮತ್ತು ನಾಯಕ ಟಿಮ್ ಪೈನ್ ಅಜೇಯ 73 ರನ್ ಗಳಿಸಿದರು. ಇವರ ಹೊರತಾಗಿ ಉಳಿದ ಬ್ಯಾಟ್ಸ್ ಮನ್ ಗಳು ನಿರೀಕ್ಷಿತ ಪ್ರದರ್ಶನ ನೀಡಲು ಸಫಲರಾಗಲಿಲ್ಲ. ಅಂತಿಮವಾಗಿ ಆಸ್ಟ್ರೇಲಿಯಾ ತಂಡ ಕೇವಲ 191 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 53 ರನ್ ಗಳ ಹಿನ್ನಡೆ ಅನುಭವಿಸಿದೆ. ಭಾರತದ ಪರ ಆರ್ ಆಶ್ವಿನ್ 4 ವಿಕೆಟ್ ಪಡೆದರೆ, ಉಮೇಶ್ ಯಾದವ್ 3 ಮತ್ತು ಜಸ್ ಪ್ರೀತ್ ಬುಮ್ರಾ 2 ವಿಕೆಟ್ ಪಡೆದರು.
2ನೇ ದಿನದಾಟದ ಅಂತ್ಯಕ್ಕೆ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 9/1 ರನ್ ಗಳಿಸಿದ್ದು, ಆಸಿಸ್ ವಿರುದ್ಧ 62 ರನ್ ಗಳ ಮುನ್ನಡೆ ಸಾಧಿಸಿದೆ.