ಮುಂಬೈ, ಏ. 2 (DaijiworldNews/SM): ಕೊರೋನಾ ಪಾಸಿಟಿವ್ ಕಂಡು ಬಂದ ಆರು ದಿನಗಳ ಬಳಿಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರು ದಿನಗಳ ಹಿಂದೆ ಸಚಿನ್ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿತ್ತು. ಬಳಿಕ ಹೋಂ ಕ್ವಾರಂಟೈನ್ ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಸೋಂಕಿನಿಂದ ಮುಕ್ತವಾಗದ ಹಿನ್ನೆಲೆ ಶುಕ್ರವಾರದಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಾನು ಆಸ್ಪತ್ರೆಗೆ ದಾಖಲಾಗಿರುವ ವಿಚಾರವನ್ನು ಸಚಿನ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.