ಚೆನ್ನೈ, ಏ. 23 (DaijiworldNews/SM): ಇಲ್ಲಿನ ಎಂ.ಎ. ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮತ್ತೊಮ್ಮೆ ಬೃಹತ್ ಮೊತ್ತ ಪೇರಿಸಲು ವಿಫಲವಾಗಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ್ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡ ಇಪ್ಪತ್ತು ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 131 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.
ಮುಂಬೈ ಪರ ನಾಯಕ ರೋಹಿತ್ ಶರ್ಮಾ 63, ಸೂರ್ಯಕಾಂತ್ ಯಾದವ್ 33, ಪೊಲಾರ್ಡ್ 16 ರನ್ ಸಿಡಿಸಿದರು. ಇಶಾನ್ ಕಿಶಾನ್ ಬ್ಯಾಟ್ ನಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ. ಹದಿನೇಳು ಎಸೆತಗಳನ್ನು ಎದುರಿಸಿದ ಇಶಾನ್ ಕಿಶಾನ್ 6 ರನ್ ಗಳನ್ನಷ್ಟೇ ಗಳಿಸಿ ನಿರಾಸೆ ಮೂಡಿಸಿದರು. ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರಲಿಲ್ಲ.