ಚಿಕ್ಕಮಗಳೂರು, ಮೇ 06 (DaijiworldNews/SM): ಭಾರತೀಯ ಮಹಿಳಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿಯವರು ವಾರಗಳ ಹಿಂದೆ ಕೊರೋನಾದಿಂದಾಗಿ ತನ್ನ ತಾಯಿಯನ್ನು ಕಳೆದುಕೊಂಡಿದ್ದರು. ಇದೀಗ ಅವರ ಸಹೋದರಿ ಕೂಡ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ವೇದಾ ಕೃಷ್ಣಮೂರ್ತಿಯವರ ಸೋದರಿ ವತ್ಸಲಾ ಶಿವಕುಮಾರ್(42) ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವತ್ಸಲಾ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಇದಕ್ಕೆ ಕೆಲವೇ ದಿನಗಳ ಹಿಂದೆ ವೇದಾ ಅವರ ತಾಯಿ ಚೆಲುವಾಂಬ(63) ಸೋಂಕಿನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇದೀಗ ಸೋದರಿ ಕೂಡ ಪ್ರಾಣ ಬಿಟ್ಟಿದ್ದು ವೇದಾ ಅವರ ಕುಟುಂಬದಲ್ಲಿ ಶೋಕ ಸಾಗರದಲ್ಲಿ ಮುಳುಗಿದೆ.