ನವದೆಹಲಿ, ಜೂ 30 (DaijiworldNews/MS): ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗಾಗಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮತ್ತು ಪುರುಷರ ತಂಡದ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಈ ಇಬ್ಬರಲ್ಲದೆ ಹಿರಿಯ ಓಪನರ್ ಶಿಖರ್ ಧವನ್, ಕೆ.ಎಲ್.ರಾಹುಲ್ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
ಮುಂಬರುವ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ 2021 ಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಈ ಹಿಂದೆ ನಿರ್ಧರಿಸಿತ್ತು. ಈ ಮೊದಲು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 21 ಆಗಿತ್ತು
ಕ್ರಿಕೆಟ್ನ ಹೊರತಾಗಿ ಹಾಕಿ ಖೇಲ್ ರತ್ನಾಗೆ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್ ಮತ್ತು ಅರ್ಜುನ ಪ್ರಶಸ್ತಿಗೆ ಹರ್ಮನ್ಪ್ರೀತ್ ಸಿಂಗ್, ವಂದನಾ ಕಟಾರಿಯಾ ಮತ್ತು ನವಜೋತ್ ಕೌರ್ ಅವರನ್ನು ನಾಮಕರಣ ಮಾಡಿದೆ.