ಟೋಕಿಯೋ, ಆ.01 (DaijiworldNews/HR): ಟೋಕಿಯೋ ಒಲಂಪಿಕ್ಸ್ನಲ್ಲಿ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಕಂಚಿನ ಪದಕ ಗೆದ್ದಿದ್ದಾರೆ.
ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಇನ್ನು ಪಂದ್ಯದ ಆರಂಭದಿಂದಲೇ ಹಿಡಿತ ಸಾಧಿಸಿದ ಸಿಂಧು, ಆಕ್ರಮಕಾರಿ ಆಟಕ್ಕೆ ಒತ್ತು ನೀಡಿದ್ದು, ಮೊದಲ ಸೆಟ್ನಲ್ಲಿ ಒಂದು ಹಂತದಲ್ಲಿ 14-8 ಮುನ್ನಡೆ ಕಾಯ್ದುಕೊಂಡು 21-13ರ ಅಂತರದಲ್ಲಿ ಸುಲಭವಾಗಿ ಸೆಟ್ ಗೆದ್ದಿದ್ದಾರೆ.
ಚೀನಾದ ಹಿ ಬಿಂಗ್ ಜಿಯಾವೋ ವಿರುದ್ಧ 21-13, 21-15 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.