ಟೋಕಿಯೊ, ಆ.02 (DaijiworldNews/HR): ಜಪಾನ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ನಲ್ಲಿ ಭಾರತದ ಬಾಕ್ಸರ್ ಸತೀಶ್ ಕುಮಾರ್ ಅವರು ಕ್ವಾರ್ಟರ್ಫೈನಲ್ನಲ್ಲಿ ಸೋಲು ಅನುಭವಿಸಿದರೂ ಕೂಡ ಬಾಕ್ಸಿಂಗ್ ರಿಂಗ್ನಲ್ಲಿ ಹೋರಾಟ ತೋರುವ ಮೂಲಕ ಭಾರತದ ಎಲ್ಲರ ಹೆಮ್ಮೆಗೆ ಪಾತ್ರರಾಗಿದ್ದಾರೆ.
ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಉಜ್ಬೆಕಿಸ್ತಾನದ ಬಖೊದಿರ್ ಜಲೊಲೊವ್ ಅವರ ಕೈಯಿಂದ ಬಲವಾದ ಏಟು ತಿಂದ ಸತೀಶ್ ಕುಮಾರ್, ಅವರ ಹೋರಾಟದ ಮನೋಬಲ ಕಿಂಚಿತ್ತು ಕುಗ್ಗಲಿಲ್ಲ.
ಇನ್ನು ಕಣ್ಣಿನ ಅಂಚು, ಗಲ್ಲ, ಹಣೆಯಿಂದ ರಕ್ತ ಚೆಲ್ಲುತ್ತಿದ್ದರೂ ಅದ್ಯಾವುದನ್ನು ಲೆಕ್ಕಿಸದ ಸತೀಶ್, ದೇಶಕ್ಕಾಗಿ ತಮ್ಮ ಸರ್ವಸ್ವವನ್ನು ಮುಡಿಪಾಗಿಟ್ಟಿದ್ದು, ಕಂಚಿನ ಪದಕ ಕೈತಪ್ಪಿದರೂ ಎದುರಾಳಿ ಸೇರಿದಂತೆ ವಿಶ್ವದಾದ್ಯಂತ ಕ್ರೀಡಾಪ್ರೇಮಿಗಳ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ್ ಒಲಿಂಪಿಕ್ಸ್ನಲ್ಲಿ ಸೂಪರ್ ಹೆವಿವೇಟ್ (91+ ಕೆ.ಜಿ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮೊದಲ ಬಾಕ್ಸರ್ ಎಂಬ ಹಿರಿಮೆಗೂ ಸ ಭಾಜನರಾಗಿದ್ದಾರೆ.