ನವದೆಹಲಿ, ಆ. 24 (DaijiworldNews/SM): ಟೀಂ ಇಂಡಿಯಾದ ಮುಂದಿನ ಕೋಚ್ ರಾಹುಲ್ ದ್ರಾವಿಡ್ ಆಗಲಿದ್ದಾರೆ ಎನ್ನುವುದು ಹಲವರ ಅಭಿಪ್ರಾಯವಾಗಿದೆ. ಆದರೆ, ರಾಹುಲ್ ದ್ರಾವಿಡ್ ಗೆ ಕೋಚ್ ಸ್ಥಾನ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಿ 20 ವಿಶ್ವ ಕಪ್ ನಂತರ ಪ್ರಸ್ತುತ ಇರುವ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಅವದಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆ ಈ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಪೂರಕವಾಗಿ ಬಿಸಿಸಿಐ ಕೂಡ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯೆ ನೀಡಿದ್ದು, ಶೀಘ್ರದಲ್ಲೇ ಹೊಸದಾಗಿ ಸ್ಪಷ್ಟತೆ ಸಿಗಲಿದೆ ಎಂದಿದೆ.
ಪ್ರಸ್ತುತ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ವಿಕ್ರಮ್ ರಾಥೋಡ್ ಅವರ ಹೆಸರು ಮುನ್ನಲೆಯಲ್ಲಿದ್ದು, ಅವರು ಶಾಸ್ತ್ರಿ ಬಳಿಕ ಮುಖ್ಯ ಕೋಚ್ ಆಗುವ ಸಾಧ್ಯತೆ ವ್ಯಕ್ತವಾಗಿದೆ. ಅಲ್ಲದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐನ ಹಿರಿಯರು ಕೂಡ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ವಿಚಾರ ಕುತೂಹಲ ಕೆರಳಿಸಿದೆ.