ಟೋಕಿಯೋ, ಆ 31 (DaijiworldNews/PY): ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಹೈ ಜಂಪ್ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು ಬೆಳ್ಳಿ ಪದಕ ಗೆದ್ದುಕೊಂಡರೆ, ಶರದ್ ಕುಮಾರ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಮಂಗಳವಾರ ನಡೆದ ಪುರುಷರ ಹೈಜಂಪ್ ಟಿ63 ಸ್ಪರ್ಧೆಯಲ್ಲಿ ಮರಿಯಪ್ಪನ್ ಹಾಗೂ ತಂಗವೇಲು ಹಾಗೂ ಶರದ್ ಕುಮಾರ್ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ.
ತಂಗವೇಲು ಮೂರು ಪ್ರಯತ್ನದಲ್ಲೂ 1.88 ಮೀ. ಎತ್ತರಕ್ಕೆ ಜಿಗಿಯುವಲ್ಲಿ ವಿಫಲರಾದರು. ರಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ್ದ ತಂಗವೇಲು ಈ ಬಾರಿ ಭಾರೀ ನಿರೀಕ್ಷೆ ಮೂಡಿಸಿದ್ದರು.
ಈ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪದಗಳ ಸಂಖ್ಯೆ 10ಕ್ಕೆ ತಲುಪಿದೆ.