ರಾಂಚಿ, ನ. 19 (DaijiworldNews/SM): ಇಲ್ಲಿನ ಜೆ ಎಸ್ ಸಿ ಎ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ವಿರುದ್ಧ ಗೆಲ್ಲುವ ಮೂಲಕ ಸರಣಿ ತನ್ನದಾಗಿಸಿಕೊಂಡಿದೆ. ವಿರಾಟ್ ನಾಯಕತ್ವಕ್ಕೆ ವಿದಾಯ ಹೇಳಿದ ಬಳಿಕ ನಡೆದ ಮೊದಲ ಸರಣಿ ಇದಾಗಿದ್ದು, ರೋಹಿತ್ ನಾಯಕತ್ವದಲ್ಲಿ ಭಾರತ ಸರಣಿ ಗೆದ್ದುಕೊಂಡಿದೆ.
ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಕಿವೀಸ್ ವಿರುದ್ಧದ ಚುಟುಕು ಕ್ರಿಕೆಟ್ ಸರಣಿಯನ್ನ ಮುಡಿಗೇರಿಸಿಕೊಂಡಿದೆ. ಹೊಸ ನಾಯಕ ರೋಹಿತ್ ಶರ್ಮಾ ಮತ್ತು ಹೊಸ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತ ಮೊದಲ ಸರಣಿಯನ್ನ ಗೆದ್ದು ಬೀಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಕಿವೀಸ್ ನಿಗದಿತ ಇಪ್ಪತ್ತು ಓವರ್ ಗಳಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 153 ರನ್ ಪೇರಿಸಿತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 17.2 ಓವರ್ ಗಳಲ್ಲಿ ಮೂರು ವಿಕೆಟ್ ಗಳ ನಷ್ಟಕ್ಕೆ 155 ರನ್ ಗಳಿಸಿ ವಿಜಯದ ನಗೆ ಚೆಲ್ಲಿತು.
ನಾಯಕ ರೋಹಿತ್ ಶರ್ಮಾ 55, ಉಪನಾಯಕ ಕೆ.ಎಲ್. ರಾಹುಲ್ 65 ರನ್ ಸಿಡಿಸಿದರು.