ಕಾನ್ಪುರ್, ನ. 29 (DaijiworldNews/SM): ಇಲ್ಲಿನ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.
ರೋಚಕ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 1 ವಿಕೆಟ್ ಅಗತ್ಯವಿತ್ತು. ಆದರೆ, ಐದನೇ ದಿನದಾಟದ ಅಂತ್ಯಕ್ಕೆ ವಿಕೆಟ್ ಕಬಲಿಸಲಾಗದೇ, ಟೀಂ ಇಂಡಿಯಾ ಪರದಾಡಿತು. ಈ ಮೂಲಕ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 345 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ನ್ಯೂಜಿಲ್ಯಾಂಡ್ 296 ರನ್ ಗಳಿಸಿತು. ಇನ್ನು ಎರಡನೇ ಇನ್ನಿಂಗ್ಸ್ ನಲ್ಲಿ 234 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಐದನೇ ದಿನದಾಟದಂತ್ಯಕ್ಕೆ ನ್ಯೂಜಿಲ್ಯಾಂಡ್ ಒಂಬತ್ತು ವಿಕೆಟ್ ಗಳ ನಷ್ಟಕ್ಕೆ 165 ರನ್ ಗಳಿಸುವ ಮೂಲಕ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು.